ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಯುವತಿ ಮಾಡಿದ್ದೇನು ಗೊತ್ತಾ..?

0
77

ಪ್ರಿಯಕರ ಫೋನ್ ಕರೆ ಸ್ವೀಕರಿಸಲಿಲ್ಲವೆಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ. ವಿಷಯ ತಿಳಿದ ಯುವಕನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೇಖಾ (19), ವಿಷ್ಣು ಪಗಲಾಪುರ (20) ಮೃತಪಟ್ಟ ಪ್ರೇಮಿಗಳು.

ನಿನ್ನೆ ರೇಖಾ, ವಿಷ್ಣುಗೆ ದಿನವಿಡೀ ಫೋನ್ ಕರೆ ಮಾಡಿದ್ದಾಳೆ. ಆದರೆ ವಿಷ್ಣು ಫೋನ್ ಕರೆ ಸ್ವೀಕರಿಸಿಲ್ಲ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿಯುತ್ತಿದಂತೆ ತನ್ನ ಅಜ್ಜಿಯ ಮನೆಗೆ ತೆರಳಿದ ವಿಷ್ಣು ನೇಣಿಗೆ ಶರಣಾಗಿದ್ದಾನೆ.

ಇವರಿಬ್ಬರು ಐದು ವರ್ಷಗಳಿಂದ ಪರಸ್ಪರ ‌ಪ್ರೀತಿಸುತ್ತಿದ್ದರು. ಮೊದಮೊದಲು ಇವರ ಪ್ರೀತಿಗೆ ಮನೆಯವರ ವಿರೋಧ ಎದುರಾಗಿದ್ದು, ನಂತರ ಎರಡೂ ಮನೆಯವರು ಸೇರಿ ಐದು ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿದ್ದರು. ಮುಂದಿನ ಏಪ್ರಿಲ್ 24ಕ್ಕೆ ಮದುವೆ ದಿನಾಂಕವನ್ನು ನಿಶ್ಚಯ ಮಾಡಲಾಗಿತ್ತು. ಆದರೆ ಅಷ್ಟರಲ್ಲಾಗಲೇ ದುರಂತ ಸಂಭವಿಸಿದೆ. ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here